ರೈಲು ಢಿಕ್ಕಿ ಹೊಡೆದು ಮಹಿಳೆ ಮೃತ್ಯು
ಬ್ರಹ್ಮಾವರ, ಸೆ.8: ಗೂಡ್ಸ್ ರೈಲೊಂದು ಢಿಕ್ಕಿ ಹೊಡೆದ ಪರಿಣಾಮ ರೈಲ್ವೆ ಹಳಿ ದಾಟುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಇಂದು ಬೆಳಗ್ಗೆ 7:15ರ ಸುಮಾರಿಗೆ ಬಾರಕೂರು ಬಳಿ ನಡೆದಿದೆ.
ಮೃತರನ್ನು ಹಂದಾಡಿಯ ಬೇಳೂರುಜೆಡ್ಡು ನಿವಾಸಿ ಗಿರಿಜಾ (68) ಎಂದು ಗುರುತಿಸಲಾಗಿದೆ.
ಇವರು ತನ್ನ ಮಗಳ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗೂಡ್ಸ್ ರೈಲೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story