ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು
ಉಡುಪಿ, ಸೆ.11: 2018-19ನೇಸಾಲಿನಲ್ಲಿ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮ, ಪದವಿ, ಬಿಎಡ್, ಬಿಪಿಎಡ್, ಸ್ನಾತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ದೂರವಾಣಿ ಸಂಖ್ಯೆ: 0820- 2574892ನ್ನು ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.