ಸೆ. 16:ಎಸ್ಸೆಸ್ಸೆಫ್ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018
ಮಂಗಳೂರು, ಸೆ.14: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018 ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಅಧ್ಯಕ್ಷತೆಯಲ್ಲಿ ಸೆ.16 ರಂದು ಮಸ್ಜಿದ್ ಖುಬಾ ಶರೀಫ್ ಕಾಲನಿ ಹಾಸನದಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ತರಗತಿಯನ್ನು ನಡೆಸಲಿದ್ದಾರೆ ಎಂದು ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story