ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ತನಿಖೆಗೆ ಕ್ಯಾಂಪಸ್ ಫ್ರಂಟ್ ಒತ್ತಾಯ
ಬಂಟ್ವಾಳ, ಸೆ.20: ತಾಲೂಕಿನ ಗೂಡಿನಬಳಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ನಡೆಸಿರುವ ಅತ್ಯಾಚಾರ ಯತ್ನ ಪ್ರಕರಣವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ ಐ) ಬಂಟ್ವಾಳ ತಾಲೂಕು ಸಮಿತಿ ಖಂಡಿಸಿದೆ.
ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದ್ದು, ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅದರಲ್ಲೂ ಪ್ರತಿಷ್ಠಿತ ಬುದ್ದಿವಂತರ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆಯುವುತ್ತಿರುವುದು ನಮ್ಮನ್ನು ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಕೂಲಂಕುಷವಾಗಿ ತನಿಖೆ ನಡೆಸಿ ಬಾಲಕಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಬಾಲಕಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿಎಫ್ ಐ ಬಂಟ್ವಾಳ ತಾಲೂಕು ಅಧ್ಯಕ್ಷ ನಬೀಲ್ ರಹ್ಮಾನ್ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
Next Story