ಮರಳು ಅಕ್ರಮ ಸಾಗಾಟ: 3 ಟಿಪ್ಪರ್ ಗಳು ಪೊಲೀಸ್ ವಶಕ್ಕೆ
ಮಂಗಳೂರು, ಸೆ.21: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ 3 ಟಿಪ್ಪರ್ ಲಾರಿಗಳನ್ನು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳವು ಪಡೀಲ್ ಜಂಕ್ಷನ್ ಬಳಿ ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಪಡೀಲ್ ಜಂಕ್ಷನ್ ಮತ್ತು ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಈ ಅಕ್ರಮ ಸಾಗಾಟ ಪತ್ತೆಯಾಗಿದೆ. ವಶಪಡಿಸಿಕೊಂಡ ಮರಳು ಹಾಗೂ ವಾಹನಗಳ ಒಟ್ಟು ಮೌಲ್ಯ 50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಇವುಗಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story