ರಶೀದಾ ಬಾನು
ಮಂಗಳೂರು, ಸೆ.21: ನಗರದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ, ಪಂಪ್ವೆಲ್ ನಿವಾಸಿ ಝಾಹಿದ್ ಎಂಬವರ ಪತ್ನಿ ರಶೀದಾ ಬಾನು(42) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ತಾಯಿ, ಪತಿ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಸೆ.22ರಂದು ಮಧ್ಯಾಹ್ನ 12 ಗಂಟೆಯೊಳಗೆ ಬಂದರ್ನ ಜಾಮಿಯ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story