ಗಂಜಿಮಠ: ವಿವಾಹಿತ ನಾಪತ್ತೆ
ಮಂಗಳೂರು, ಸೆ. 21: ಬಡಗ ಉಳಿಪಾಡಿ ಗ್ರಾಮದ ಗಂಜಿಮಠ ಸಮೀಪದ ಜೆ.ಎಂ. ರಸ್ತೆ ನಿವಾಸಿ ಮುಹಮ್ಮದ್ ಸಮೀರ್ (35) ಎಂಬವರು ನಾಪತ್ತೆಯಾದ ಬಗ್ಗೆ ಅವರ ತಂದೆ ಅಹ್ಮದ್ ಸಾಹೇಬ್ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ಸೆ.13ರಂದು ಮುಹಮ್ಮದ್ ಸಮೀರ್ ತನ್ನ ಪತ್ನಿ ಫಿರ್ದೌಸ್ ಮತ್ತು ಮೂರು ತಿಂಗಳ ಹೆಣ್ಣು ಮಗುವಿನೊಂದಿಗೆ ತನ್ನ ಮನೆಯಿಂದ ಬೆಂಗಳೂರಿಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಹೋದವನು ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ.15ರಂದು ಸಂಜೆ ತನ್ನ ತಾಯಿಗೆ ದೂರವಾಣಿ ಕರೆ ಮಾಡಿದ ಮುಹಮ್ಮದ್ ಸಮೀರ್ ತಾನು ಬೆಂಗಳೂರಿನಲ್ಲಿ ಇರುವುದಾಗಿ ತಿಳಿಸಿದ್ದಾನೆ. ಬಳಿಕ ಮುಹಮ್ಮದ್ ಸಮೀರ್ ಮನೆಯವರೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ. ಈ ಮಧ್ಯೆ ಸೆ.18ರಂದು ಫಿರ್ದೌಸ್ ತನ್ನ ಮಗುವಿನೊಂದಿಗೆ ತಾಯಿಯ ಮನೆಯಾದ ಕಾಪುವಿಗೆ ಬಂದಿರುವುದಾಗಿ ಮಾಹಿತಿ ತಿಳಿದು ಬಂದ ಮೇರೆಗೆ ಆಕೆಯಲ್ಲಿ ಮುಹಮ್ಮದ್ ಸಮೀರ್ನ ಬಗ್ಗೆ ವಿಚಾರಿಸಿದಾಗ ಆತ ಬೇರೆ ಹುಡುಗಿಯ ಸಂಪರ್ಕದಲ್ಲಿದ್ದು ತನ್ನನ್ನು ಮತ್ತು ಮಗುವನ್ನು ಕಾಪುವಿನಲ್ಲಿ ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಹಾಗಾಗಿ ಮುಹಮ್ಮದ್ ಸಮೀರ್ನ ಸಂಪರ್ಕ ಬೆಳೆಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದರೂ ಆತ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.