ಸೆ.27ರಂದು ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಮಟ್ಟದ ಸಭೆ
ಉಡುಪಿ, ಸೆ.23: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಉಡುಪಿ ಜಿಲ್ಲಾ ಮಟ್ಟದ ಸಭೆ ಸೆ.27ರಂದು ಬೆಳಗ್ಗೆ 10ಕ್ಕೆ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಎಲ್ಲೈಸಿ ನೌಕರರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ ಹಾಗೂ ಕಾರ್ಯದರ್ಶಿ ಹನುಮೇಗೌಡ ಬೆಂಗಳೂರು ಭಾಗವಹಿಸಲಿದ್ದಾರೆ. ನೌಕರರಿಗೆ ಕಳೆದ 3 ತಿಂಗಳಿಂದ ವೇತನ ಸಿಗದಿರುವ ಬಗ್ಗೆ ಅಧಿಕಾರಿಗಳ ಜತೆ ಬೆಂಗಳೂರಿನಲ್ಲಿ ನಡೆಸಿದ ಮಾತುಕತೆ ಮತ್ತಿತರ ಬೆಳವಣಿಗೆಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story