ಸೆ.28 ರಂದು ಪೋಷಣ ಅಭಿಯಾನಕ್ಕೆ ಚಾಲನೆ
ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ, ರೋಟರಿ ಕ್ಲಬ್ ಪೆರ್ಡೂರು ಹಾಗೂ ಗ್ರಾಪಂ ಪೆರ್ಡೂರು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಮಾಸಾಚರಣೆ ಪ್ರಯುಕ್ತ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಮಾತೃಪೂರ್ಣ ಯೋಜನೆ ಬಗ್ಗೆ ಜಾಥಾ ಮತ್ತು ಪೌಷ್ಠಿಕ ಆಹಾರ ಪ್ರದರ್ಶನ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಸೆ.28 ರಂದು ಬೆಳಗ್ಗೆ 10:30ಕ್ಕೆ ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಪೆರ್ಡೂರಿನ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದು, ಪೆರ್ಡೂರು ಗ್ರಾಪಂ ಅಧ್ಯಕ್ಷೆ ಶಾಂಭವಿ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story