ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ
ಉಡುಪಿ, ಸೆ. 27: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಹಿರಿಯ ಉಪಾಧ್ಯಕ್ಷರಾಗಿ ಹಾಜಿ ಅಬ್ದುಲ್ಲಾ ಪರ್ಕಳ, ಪ್ರಧಾನ ಕಾರ್ಯ ದರ್ಶಿಯಾಗಿ ಎಂ.ಎ.ಮೌಲಾ ಉಡುಪಿ, ಉಪಾಧ್ಯಕ್ಷರುಗಳಾಗಿ ಶಾಬಾನ್ ಹಂಗ್ಳೂರು, ಶಭಿ ಅಹ್ಮದ್ ಕಾಝಿ ಕಾಪು, ಅಶ್ಫಕ್ ಅಹ್ಮದ್ ಕಾರ್ಕಳ, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಜಂಟಿ ಕಾರ್ಯದರ್ಶಿಯಾಗಿ ಅಝೀಝ್ ಉದ್ಯಾವರ, ಕೋಶಾಧಿಕಾರಿಯಾಗಿ ಇಕ್ಬಾಲ್ ಸಂಶುದ್ದೀನ್ ಕಟಪಾಡಿ, ಕ್ಯಾಶಿಯರ್ ಆಗಿ ಕಾಸಿಂ ಬಾರಕೂರು, ಅಕೌಂಟೆಂಟ್ ಆಗಿ ರಿಯಾಝ್ ಅಹ್ಮದ್ ಕುಕ್ಕಿಕಟ್ಟೆ ಅವರನ್ನು ಆಯ್ಕೆ ಮಾಡಲಾಯಿತು.
Next Story