ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಹಾಸ್ಟೆಲ್ ಮ್ಯಾನೇಜ್ಮೆಂಟ್ ಡಿಪ್ಲೋಮಾ ಕೋರ್ಸ್
ಮಂಗಳೂರು, ಅ.1: ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆ ಹಾಸ್ಟೆಲ್ ಮ್ಯಾನೇಜ್ಮೆಂಟ್ ಡಿಪ್ಲೋಮಾ ಕೋರ್ಸ್ ಆರಂಭಿಸಲಿದೆ.
ಈ ರೀತಿಯ ಕೋರ್ಸ್ ರಾಷ್ಟ್ರಮಟ್ಟದಲ್ಲಿಯೇ ಪ್ರಥಮ ಬಾರಿಗೆ ಪರಿಚಯಿಸಲಾಗುತ್ತಿದೆ ಎಂದು ವಿಕಾಸ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣ ಜೆ.ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಹಾಸ್ಟೆಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಿಭಾಗದ ನೌಕರರಿಗೆ ಸೂಕ್ತವಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಕೋರ್ಸ್ನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ವಿಕಾಸ್ ಎಜುಕೇಶನ್ ಸೊಲ್ಯೂಶನ್ನ ನಿರ್ದೇಶಕ ಡಾ. ಅನಂತ ಪ್ರಭು, ವಿಕಾಸ್ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ಕೊರಗಪ್ಪ, ವಿಕಾಸ್ ಸಮೂಹ ಸಂಸ್ಥೆಗಳ ಡೀನ್ ಹಾಗೂ ಸಲಹೆಗಾರರಾದ ಡಾ. ಮಂಜುಳಾ ರಾವ್ ಮೊದಲಾದವರು ಉಪಸ್ಥಿತರಿದ್ದರು.
Next Story