ಬೆಂಗಳೂರು: ಬಸ್ ಢಿಕ್ಕಿ; ಪಾದಚಾರಿ ಮೃತ್ಯು
ಬೆಂಗಳೂರು, ಅ.7:ರಸ್ತೆ ದಾಟುತ್ತಿದ್ದ ವೃದ್ಧನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಆರ್.ಟಿ.ನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಬೆಂಗಳೂರು-ಬಳ್ಳಾರಿ ರಸ್ತೆ, ಆನಂದ ನಗರ ಕ್ರಾಸ್ನಲ್ಲಿ 60 ವರ್ಷದ ವೃದ್ಧ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದ್ದು, ಆರ್.ಟಿ.ನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Next Story