ಚುನಾವಣೆಗೆ ಇವಿಎಂ ಬಳಸದಂತೆ ಕೋರುವ ಅರ್ಜಿ ವಜಾಗೊಳಿಸಿದ ಸುಪ್ರೀಂ
ಹೊಸದಿಲ್ಲಿ,ನ.22: ಮುಂಬರುವ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ಗಳ ಬದಲಿಗೆ ಮತಪತ್ರಗಳನ್ನು ಬಳಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ.
ಇವಿಎಂಗಳನ್ನು ದುರ್ಬಳಕೆ ಮಾಡಲು ಸಾಧ್ಯವಿದೆ ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಾತರಿಪಡಿಸಲು ಅವುಗಳನ್ನು ಚುನಾವಣೆಗೆ ಬಳಸದಂತೆ ಆದೇಶ ಹೊರಡಿಸಬೇಕೆಂದು ಕೋರಿ ಎನ್ಜಿಓ ಸಂಸ್ಥೆ ‘ನ್ಯಾಯಭೂಮಿ’ ಸುಪ್ರೀಂಕೋರ್ಟ್ನ ಮೆಟ್ಟಲೇರಿತ್ತು.
ಆದರೆ ಎನ್ಜಿಓ ಸಂಸ್ಥೆಯ ವಾದಕ್ಕೆ ಸಹಮತ ವ್ಯಕ್ತಪಡಿಸದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠವು, ಪ್ರತಿಯೊಂದು ವ್ಯವಸ್ಥೆ ಹಾಗೂ ಯಂತ್ರವು ದುರ್ಬಳಕೆಯಾಗಲು ಸಾಧ್ಯವಿದೆ. ಹಾಗೆಯೇ ಎಲ್ಲಾ ವಿಷಯದಲ್ಲೂ ಸಂದೇಹಗಳು ಇದ್ದೇ ಇರುತ್ತವೆ ಎಂದು ತಿಳಿಸಿದೆ.
Next Story