ಕೀರ್ತನಾ
ಬಂಟ್ವಾಳ, ಡಿ. 2: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ನರಿಕೊಂಬು ಗ್ರಾಮದ ಗಿರಿಯಪ್ಪ ಎಂಬವರ ಪುತ್ರಿ ಕೀರ್ತನಾ (19) ಅಸೌಖ್ಯದಿಂದ ರವಿವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಈಕೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶೇಡಿಗುರಿ ನಿವಾಸಿ, ಕೀರ್ತನಾ ತಂದೆ, ತಾಯಿಗೆ ಒಬ್ಬಳೇ ಮಗಳು. ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಈಕೆಯನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕಂಕನಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಿಕರು ತಿಳಿಸಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಈಕೆ, ಡಿ. 8ರಂದು ಫರಂಗಿಪೇಟೆಯಲ್ಲಿ ನಡೆಯುವ ತಾಲೂಕು 19ನೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿಗೆ ಆಯ್ಕೆಯಾಗಿದ್ದರು.
Next Story