ಶಿರ್ವ, ಡಿ.5: ಶಿರ್ವ ಗ್ರಾಮ ಪಂಚಾಯತ್ ಸದಸ್ಯ ನಝೀರ್ ಇಸ್ಮಾಯಿಲ್ (50) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಶಿರ್ವ ರೋಟರಿ ಕ್ಲಬ್ನ ಮಾಜಿ ಸದಸ್ಯ, ಶಿರ್ವ ರೋಟರ್ಯಾಕ್ಟ್ ಕ್ಲಬ್ನ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಇಬ್ಬರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ.