ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ: ಮೂವರ ಬಂಧನ
ಬೆಂಗಳೂರು, ಡಿ.29: ರಾತ್ರಿ ವೇಳೆ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಆರೋಪದಡಿ ಮೂವರನ್ನು ಇಲ್ಲಿನ ಬಾಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪವನ್, ಪಿ.ಕಿರಣ್ ಸಿಂಗ್, ಮಧು ಎಂಬುವವರು ಬಂಧಿತ ಆರೋಪಿಗಳೆಂದು ತಿಳಿದುಬಂದಿದೆ.
ರಾತ್ರಿ ವೇಳೆ ಅಮಾಯಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದರು. ಬಾಗಲಗುಂಟೆ, ತೋಟದ ಗುಡ್ಡದಳ್ಳಿ, ಸೇರಿ ಹಲವೆಡೆ ದಾಂಧಲೆ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
Next Story