ಮಹಿಳಾ ದಿನಾಚರಣೆ ; ಎನ್ ಡಬ್ಲ್ಯೂಎಫ್ ಪುತ್ತೂರು ತಾಲ್ಲೂಕು ಸಮಿತಿ ವತಿಯಿಂದ ಕಾರ್ಯಕ್ರಮ
ಪುತ್ತೂರು, ಮಾ. 8: ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಾಗೂ ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮವು ಯೂನಿಟ್ ಹೌಸ್ ಕಚೇರಿ ಕುಂಬ್ರದಲ್ಲಿ ನಡೆಯಿತು.
ನ್ಯಾಷನಲ್ ವಿಮನ್ಸ್ ಫ್ರಂಟ್ ಆಫ್ ಇಂಡಿಯಾ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಉಮೈರಾ ಶರೀಫ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಆಯಿಷಾ ಝೀಯಾ ಹಾಗೂ ಮರಿಯಂ ರಫಾನ ಇವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ನಗರಸಭಾ ಸದಸ್ಯರಾದ ಫಾತಿಮತ್ ಝೂಹರಾ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಸಮಿತಿ ಸದಸ್ಯರಾದ ಮಿಸ್ರೀಯಾ ಅಂಕತ್ತಡ್ಕ ಹಾಗೂ ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲ್ಲೂಕು ಸಮಿತಿ ಕಾರ್ಯದರ್ಶಿಯಾದ ಸಜರಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು ಹಾಗೂ ಹಲವಾರು ಮಹಿಳೆಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಸಾರ ಹಸೈನಾರ್ ಸ್ವಾಗತಿಸಿ, ಸೌಧ ಬೆಳ್ಳಾರೆ ಹಾಗೂ ಸಫಾನ ಪಿಬಿಕೆ ಕಾರ್ಯಕ್ರಮವನ್ನು ನಿರೂಪಿಸಿದರು.