ಉಡುಪಿ ಮಹಿಳಾ ಮಕ್ಕಳ ಆಸ್ಪತ್ರೆಗೆ ಸಚಿವೆ ಜಯಮಾಲಾ ಭೇಟಿ
ಉಡುಪಿ, ಮಾ.10: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ರವಿವಾರ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸಚಿವರು ಆಸ್ಪತ್ರೆಯ ರೋಗಿಗಳ ಮತ್ತು ನವಜಾತು ಶಿಶು ಹಾಗೂ ತಾಯಂದಿರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂಪ್ರಕಾಶ್ ಕಟ್ಟೀಮನಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶಿಖಾ ಮೊದ ಲಾದವರು ಉಪಸ್ಥಿತರಿದ್ದರು.
Next Story