ಉಡುಪಿ: ವಿವಿಧೆಡೆ ಪಲ್ಸ್ ಪೊಲೀಯೋ ಕಾರ್ಯಕ್ರಮ
ಉಡುಪಿ, ಮಾ.10: ಬೀಡಿನಗುಡ್ಡೆಯ ಅಂಗನವಾಡಿಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ರಘುಪತಿ ಭಟ್ ರವಿವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಡಿಎಚ್ಓ ಡಾ.ಓಂಪ್ರಕಾಶ್ ಕಟ್ಟೀಮನಿ, ಪಲ್ಸ್ ಪೋಲಿಯೋ ನೋಡೆಲ್ ಅಧಿಕಾರಿ ಡಾ. ಶೀನಪ್ಪ, ಆರ್ಸಿಎಚ್ ಅಧಿಕಾರಿ ಡಾ.ಎಂ.ಜಿ.ರಾಮ, ರೋಟರಿ ಕ್ಲಬ್ನ ಚಂದ್ರಶೇಖರ್ ಉಪಸ್ಥಿತರಿದ್ದರು.
ಕುತ್ಪಾಡಿ: ಕಡೆಕಾರು ಗ್ರಾಪಂ ವ್ಯಾಪ್ತಿಯ ಕಟ್ಟೆಗುಡ್ಡೆ ಕುತ್ಪಾಡಿ ಅಂಗನವಾಡಿ ಯಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಜಿ.ಪಂ ಅಧ್ಯಕ್ಷ ದಿನಕರ ಬಾಬು ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಉದ್ಘಾಟಿಸಿದರು.
Next Story