ತಲಪಾಡಿ : ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ
ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಹಳೆ ಆರ್.ಟಿ.ಒ ಬಳಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಒಂದರಿಂದ ಗ್ಯಾಸ್ ಸೋರಿಕೆ ಕಂಡು ಬಂದಿದೆ.
ಮಂಗಳವಾರ ಸಂಜೆ 6 ಘಂಟೆಯ ಸುಮಾರಿಗೆ ಘಟನೆ ನಡೆದಿದೆ.
ಕೂಡಲೇ ಸ್ಥಳೀಯರು ಮಂಜೇಶ್ವರ ಪೊಲೀಸರಿಗೆ ಹಾಗೂ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸುರಕ್ಷಾ ಕಾರ್ಯ ನಡೆಸಿದ್ದಾರೆ.
ಗ್ಯಾಸ್ ಸೋರಿಕೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ಥವ್ಯಸ್ಥಗೊಂಡಿತ್ತು.
Next Story