ಮಾ.15ರಂದು ವಿಶ್ವ ಗ್ರಾಹಕರ ದಿನಾಚರಣೆ
ಉಡುಪಿ, ಮಾ.13: ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಉಡುಪಿ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಮಾ.15ರಂದು ಬೆಳಗ್ಗೆ 10 ಕ್ಕೆ ನಾರ್ತ್ ಶಾಲೆ ಆವರಣದ ಬಳಕೆದಾರರ ವೇದಿಕೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story