ಬಸ್ನಿಂದ ಬಿದ್ದು ಮಹಿಳೆ ಸಾವು
ಮಂಗಳೂರು, ಮಾ.13: ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಬಳಿ ಮಂಗಳವಾರ ಬಸ್ನಿಂದ ಬಿದ್ದು, ತೀವ್ರ ಗಾಯಗೊಂಡಿದ್ದ ಮಹಿಳೆ ಆಸಿಯಾ ಕಕ್ಕಿಂಜೆ (28) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.
ಅವರು ಮಂಗಳವಾರ ಬೆಳಗ್ಗೆ ಕಿನ್ಯಾದಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಆರಂಭಿಸಿ ಕಣಚೂರು ಆಸ್ಪತ್ರೆ ಬಸ್ ತಂಗುದಾಣದಲ್ಲಿ ಇಳಿಯುತ್ತಿದ್ದಾಗ ಬಸ್ ಚಾಲಕನು ಒಮ್ಮೆಲೇ ಚಲಾಯಿಸಿದ್ದರಿಂದ ಆಸಿಯಾ ಅವರು ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ತಲೆಗೆ ಮತ್ತು ಎಡ ಕಾಲಿಗೆ ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story