ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪೊಕ್ಸೋ ಪ್ರಕರಣ ದಾಖಲು
ಉಡುಪಿ, ಮಾ.13: ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಮಾ. 9ರಂದು ಮಧ್ಯಾಹ್ನ ಅಂಗಡಿಯಿಂದ ನಗರದ ಹೊರವಲಯದಲ್ಲಿರುವ ಮನೆಗೆ ಹೊರಟಿದ್ದು, ಈ ವೇಳೆ ದುಷ್ಕರ್ಮಿಗಳು ಆಕೆಯನ್ನು ಮೂಡುಸಗ್ರಿಯ ಹಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರೆನ್ನಲಾಗಿದೆ.
ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕೃತ್ಯದ ಹಿಂದೆ ಉತ್ತರ ಕರ್ನಾಟಕದ ವಲಸೆ ಕಾರ್ಮಿಕನೊಬ್ಬ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆ ದಿಕ್ಕಿನಲ್ಲಿ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿಯನ್ನು ಮಣಿಪಾಲ ವೈದ್ಯರು ಇನ್ನಷ್ಟೆ ನೀಡಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Next Story