ರಾ.ಮಹಿಳಾ ಆಯೋಗದ ಸದಸ್ಯೆಯಾಗಿ ಶ್ಯಾಮಲಾ ಕುಂದರ್
ಉಡುಪಿ, ಮಾ.14: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಉಡುಪಿಯ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಅಧಿಕಾರ ವಹಿಸಿಕೊಂಡರು.
ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಉಪಸ್ಥಿತಿಯಲ್ಲಿ ಶ್ಯಾಮಲಾ ಕುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಕಚೇರಿಯಲ್ಲಿ ದಸ್ಯೆಯಾಗಿ ಅಧಿಕಾರ ವಹಿಸಿಕೊಂಡರು.
ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗದಲ್ಲಿ ಅಧ್ಯಕ್ಷರು ಸೇರಿದಂತೆ ಐವರ ಸದಸ್ಯರ ನೇಮಕವಾಗಿದೆ. ಶ್ಯಾಮಲಾ ಕುಂದರ್ ಅವರು ಅನಂತರ ರಾಷ್ಟ್ರಪತಿ ಭವನದ ದರ್ಬಾರ್ ಹಾಲಿನಲ್ಲಿ ನಡೆದ ನಾರಿ ಶಕ್ತಿ ಪುರಸ್ಕಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Next Story