ಮಾ. 21ರಿಂದ ಎಸೆಸೆಲ್ಸಿ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ, ಮಾ.14: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾ.21ರಿಂದ ಎ. 4ರವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಶಾಂತಿಯುತ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಲಾದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಕೇಂದ್ರ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿಷೇಧಾಜ್ಞೆ ಆದೇಶ ವನ್ನು ಹೊರಡಿಸಿದ್ದಾರೆ.
ಈ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಬಳಕೆಯನ್ನು ಸಹ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story