ಪಿಯುಸಿ ಕನ್ನಡ ಪರೀಕ್ಷೆ: 106 ವಿದ್ಯಾರ್ಥಿಗಳು ಗೈರು
ಉಡುಪಿ, ಮಾ.16: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿಯ ಕನ್ನಡ ಪರೀಕ್ಷೆಗೆ ಒಟ್ಟು 106 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 9489 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೊಂದಾಯಿಸಿ ಕೊಂಡಿದ್ದು, ಅದರಲ್ಲಿ 9383 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
Next Story