ಮಾ.17ರಂದು ಕೋರ್ಟ್ ಆವರಣದಲ್ಲಿ ಸ್ವಚ್ಛತಾ ಅಭಿಯಾನ
ಉಡುಪಿ, ಮಾ.16: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮತ್ತು ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಮಾ.17ರಂದು ಬೆಳಗ್ಗೆ 7ಗಂಟೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಪ್ರಾಧಿ ಕಾರದ ಅಧ್ಯಕ್ಷ ಸಿ.ಎಂ.ಜೋಷಿ ಚಾಲನೆ ನೀಡಲಿರುವರು. ಉಡುಪಿಯ ಎಲ್ಲಾ ನ್ಯಾಯಾಧೀಶರುಗಳು, ನಗರಸಭೆ ಆಯುಕ್ತರು ಹಾಗೂ ನ್ಯಾಯಾಲಯದ ಎಲ್ಲಾ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವೇಕಾನಂದ ಎಸ್.ಪಂಡಿತ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story