ಸಾಲಿಗ್ರಾಮ: ಮತದಾನದ ಅರಿವು ಜಾಥಾ
ಉಡುಪಿ, ಮಾ.16: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವೀಪ್ ಅಭಿಯಾನದಡಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾ.16ರಂದು ಹಮ್ಮಿಕೊಳ್ಳಲಾಗಿತ್ತು.
ಈ ನಿಟ್ಟಿನಲ್ಲಿ ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿ ನಂತರ ಮತದಾನ ಜಾಗೃತಿ ಅಭಿಯಾನ ಜಾಥಾವನ್ನು ಕಚೇರಿಯ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕ ರೊಂದಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.
Next Story