ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಸಿಗದ ಸುಳಿವು
ಉಡುಪಿ, ಮಾ.16: ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆಗೈದ ಘಟನೆ ಸಂಭವಿಸಿ ವಾರ ಕಳೆದರೂ ಈವರೆಗೆ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ.
ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಾದಾಮಿ ಮೂಲದ 17ರ ಹರೆಯದ ಬಾಲಕಿ ಮಾ.9ರಂದು ಮಧ್ಯಾಹ್ನ ಅಂಗಡಿಯಿಂದ ನಿಟ್ಟೂರಿ ನಲ್ಲಿರುವ ಮನೆಗೆ ಹೊರಟಿದ್ದು, ಈ ವೇಳೆ ದುಷ್ಕರ್ಮಿಗಳು ಆಕೆಯನ್ನು ಹಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು.
ಈ ಸಂಬಂಧ ನಾಲ್ಕು ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ. ‘ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ನಮ್ಮ ತಂಡ ಅದರ ಹಿಂದೆ ಕೆಲಸ ಮಾಡುತ್ತಿದೆ. ತಾಂತ್ರಿಕವಾಗಿ ಪರಿಶೀಲನೆ ನಡೆಸಲಾಗುತ್ತಿದ್ದು, ಈವರೆಗೆ ಯಾವುದೇ ಸುಳಿವು ಲಭ್ಯವಾಲ್ಲ’ ಎಂದು ಎಸ್ಪಿ ನಿಶಾ ಜೇಮ್ಸ್ ತಿಳಿಸಿದ್ದಾರೆ.
Next Story