ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ: ನ್ಯಾಯಾಧೀಶ ಜೋಷಿ
ಉಡುಪಿ, ಮಾ.17: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳು ವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮತ್ತು ನಗರಸಭೆಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಆವರಣದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.
ಸ್ವಚ್ಛ ಭಾರತ ಅಭಿಯಾನವು ಭಾರತ ಸರಕಾರದ ರಾಷ್ಟ್ರೀಯ ಸ್ವಚ್ಛತಾ ಆಂದೋಲನವಾಗಿದೆ. ಪರಿಸರ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬ ನಾಗರೀಕರಲ್ಲೂ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರಿಕನ ಜವಾ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳಾದ ವಿವೇಕಾನಂದ ಪಂಡಿತ್, ಲಾವಣ್ಯ ಎಚ್.ಎಸ್., ಭವಾನಿ ಎಲ್.ಜೆ., ಇರ್ಫಾನ್, ಮಂಜುನಾಥ ಎಂ. ಎಸ್, ಶೋಭಾ ಇ.ರಾವ್, ಪ್ರಶಾಂತ್ ಎಂ.ಎನ್, ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಮೊದಲಾದವರು ಉಪಸ್ಥಿತರಿದ್ದರು.