ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು
ಕಡಬ, ಮಾ.18: ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡ ಯುವಕನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಮೃತ ಯುವಕನನ್ನು ಕಡಬದ 102 ನೆಕ್ಕಿಲಾಡಿ ಗ್ರಾಮದ ಮಣಿ (33) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಡಿಗೆ ಕಡಬ ಸಮೀಪದ ನೀರಾಜೆ ಎಂಬಲ್ಲಿ ಮಣಿ ಬಿದ್ದಿದ್ದು, ಗಂಭೀರ ಗಾಯ ಗೊಂಡ ಅವರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story