ದ.ಕ.ಲೋಕಸಭಾ ಕ್ಷೇತ್ರ: ನಾಮಪತ್ರ ಸಲ್ಲಿಕೆ
ಮಂಗಳೂರು, ಮಾ.19: ದ.ಕ.ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಮೊದಲ ದಿನವೇ ಪ್ರಥಮ ನಾಮಪತ್ರ ಸಲ್ಲಿಕೆಯಾಗಿದೆ.
ಮಾ.26ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಎಸ್ಡಿಪಿಐ ಈಗಾಗಲೆ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಇನ್ನೂ ಅಧಿಕೃತ ಅಭ್ಯರ್ಥಿಯನ್ನು ಘೋಷಿಸಿಲ್ಲ.
Next Story