ಮಾ.25ರಂದು ಮಿಥುನ್ ರೈ ನಾಮಪತ್ರ ಸಲ್ಲಿಕೆ
ಮಂಗಳೂರು, ಮಾ.24: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಯುಕ್ತ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಪಾದಯಾತ್ರೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿರುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story