ಮಾ. 26: ವಿಶ್ವ ಕ್ಷಯರೋಗ ದಿನಾಚರಣೆ, ಮತದಾನ ಜಾಗೃತಿ ಕಾರ್ಯಕ್ರಮ
ಕಾರ್ಕಳ: ಉಡುಪಿ ಜಿ.ಪಂ., ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ, ತಾ.ಪಂ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕ್ಷಯರೋಗ ನಿಯಂತ್ರಣ ಘಟಕ, ಭುವನೇಂದ್ರ ಕಾಲೇಜು ಮತ್ತು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವು ಭುವನೇಂದ್ರ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ಮಾ.26ರಂದು ಮಧ್ಯಾಹ್ನ 2.30 ಗಂಟೆಯಿಂದ ನಡೆಯಲಿದೆ.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಡಾ.ಮೇಜರ್ ಹರ್ಷ ಕೆ.ಬಿ. ಉದ್ಘಾಟಿಸಲಿದ್ದು, ಪುರಸಭೆ ಮುಖ್ಯಾಧಿಕಾರಿ ಮೇಬಲ್ ಡಿಸೋಜ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲ ಡಾ.ಮಂಜುನಾಥ ಎ.ಕೋಟ್ಯಾನ್, ಸಹಾಯಕ ಪ್ರಾಧ್ಯಾಪಕರುಗಳಾದ ಶಿವಶಂಕರ್ ಹಾಗೂ ಸುಚಿತ್ರ ಉಪಸ್ಥಿತರಿರುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ., ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಕೆ. ಮಲ್ಯ ಭಾಗವಹಿಸುವರು.