ವಳಚ್ಚಿಲ್: ವಾಹನ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ
ಮಂಗಳೂರು, ಮಾ.26: ಪಿಕಪ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ವಳಚ್ಚಿಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಾಗಲಕೋಟೆ ನಿವಾಸಿ ತಿಪ್ಪಣ್ಣ(21) ಎಂದು ಗುರುತಿಸಲಾಗಿದೆ.
ಇವರು ವಳಚ್ಚಿಲ್ ಶ್ರೀನಿವಾಸ್ ಕಾಲೇಜು ವಿದ್ಯಾರ್ಥಿಯಾಗಿದ್ದರು. ಇವರು ನೀರುಮಾರ್ಗ ಕಡೆಯಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಕೋಳಿಗಳನ್ನು ಸಾಗಿಸುತ್ತಿದ್ದ ಪಿಕಪ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ತಿಪ್ಪಣ್ಣ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
Next Story