ಮಾಣಿ: ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ
ಬಂಟ್ವಾಳ, ಮಾ. 26: ಅಕಸ್ಮಿಕವಾಗಿ ಬೆಂಕಿ ತಗಲಿ ಫ್ಯಾನ್ಸಿ ಅಂಗಡಿಯೊಂದು ಬೆಂಕಿಗೆ ಅಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಮಂಗಳವಾರ ಮಾಣಿಯಲ್ಲಿ ಸಂಭವಿಸಿದೆ.
ಇಲ್ಲಿನ ಧರ್ಣಪ್ಪ ಬರಿಮಾರು ಎಂಬವರಿಗೆ ಸೇರಿದ ಫ್ಯಾನ್ಸಿ ಅಂಗಡಿ ಬೆಂಕಿಗೆ ಅಹುತಿಯಾಗಿ ಸುಮಾರು 1 ಲಕ್ಷ ನಷ್ಟ ಸಂಭವಿರಬಹುದು ಎಂದು ಅಂದಾಜಿಸಲಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story