ದ.ಕ. ಲೋಕಸಭಾ: ಪಕ್ಷೇತರ ಅಭ್ಯರ್ಥಿಯಾಗಿ ಖಾಲಿದ್ ನಂದಾವರರಿಂದ ನಾಮಪತ್ರ
ವಿಟ್ಲ, ಮಾ.26: ದ.ಕ. ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ಖಾಲಿದ್ ನಂದಾವರ ಮಂಗಳವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಇಬ್ರಾಹಿಂ ಜೆ.ಬಿ.ಸಿ ನಂದಾವರ, ರಹಿಮಾನ್ ನಂದಾವರ, ಯಾಸಿರ್ ನಂದಾವರ, ರಹೀಶ್ ಕುಕ್ಕಾಜೆ ಉಪಸ್ಥಿತರಿದ್ದರು.
ಮುಹಮ್ಮದ್ ಖಾಲಿದ್ ನಂದಾವರ ಬಂಟ್ವಾಳ ತಾಲೂಕು ಸಜಿಪಮೂನ್ನೂರು ಗ್ರಾಮದ ನಂದಾವರ ನಿವಾಸಿಯಾಗಿದ್ದು, ಸಾಮಾಜಿಕ ಕಾರ್ಯಕರ್ತ ರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
Next Story