ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಕಾಪು, ಮಾ. 26: ಮೂಳೂರು ಈಸ್ಟ್ವೆಸ್ಟ್ ನರ್ಸರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.26ರಂದು ಮಧ್ಯಾಹ್ನ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ಕಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ರಾಮ ಪೂಜಾರಿ(68) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಓಮಿನಿ ಕಾರು ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ರಾಮ ಪೂಜಾರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story