ಉಡುಪಿ: ಎಸಿಬಿಯಿಂದ ಅಹವಾಲು ಸ್ವೀಕಾರ
ಉಡುಪಿ, ಮಾ. 27: ಉಡುಪಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿಗಳು ಮಾ.28ರಂದು ಬೆಳಿಗ್ಗೆ 11ರಿಂದ ಅಪರಾಹ್ನ 1 ಗಂಟೆ ಯವರೆಗೆ ಕಾಪು ಪ್ರವಾಸಿ ಮಂದಿರದಲ್ಲಿ ಹಾಗೂ ಅಪರಾಹ್ನ 2:30ರಿಂದ ಸಂಜೆ 4:30ರವರೆಗೆ ಬ್ರಹ್ಮಾವರ ಪ್ರವಾಸಿ ಮಂದಿರದಲ್ಲಿ ಹಾಗೂ ಮಾ.29 ರಂದು ಬೆಳಗ್ಗೆ 11ರಿಂದ ಅಪರಾಹ್ನ 1 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ, ಅಪರಾಹ್ನ 2:30 ರಿಂದ ಸಂಜೆ 4:30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರರು ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ ತೋರಿದ್ದಲ್ಲಿ ಮತ್ತು ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಆರಕ್ಷಕ ಉಪಾಧೀಕ್ಷಕರು, ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.
Next Story