ಬಂಟ್ವಾಳ: ಲಾರಿ- ಕಾರು ಢಿಕ್ಕಿ; ಮಹಿಳೆಗೆ ಗಾಯ
ಬಂಟ್ವಾಳ, ಮಾ.27: ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರ ನಡೆದಿದೆ.
ಮಾಣಿಯಿಂದ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರು ಹಾಗೂ ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಬರುತ್ತಿದ್ದ ಲಾರಿ ನಡುವೆ ಗಡಿಯಾರ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಘಟನೆಯಿಂದ ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಲಾರಿ ಜಖಂಗೊಂಡಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
Next Story