ಉಡುಪಿ: ಎಂಸಿಎಂಸಿಗೆ ಚುನಾವಣಾ ವೀಕ್ಷಕರ ಭೇಟಿ
ಉಡುಪಿ, ಮಾ.28: ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಎಂಸಿಎಂಸಿ ಕಚೇರಿಗೆ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಕೃಷ್ಣ ಕುನಾಲ್ (ಐಎಎಸ್) ಹಾಗೂ ಪೊಲೀಸ್ ವೀಕ್ಷಕರಾದ ಸಂದೀಪ್ ಪ್ರಕಾಶ ಕಾರ್ಣಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಿತಿಯ ಕಾರ್ಯ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಂಸಿಎಂಸಿ ನೋಡೆಲ್ ಅಧಿಕಾರಿ ಹಾಗೂ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
Next Story