ಗಾಂಜಾ ಮಾರಾಟ: 1.28 ಕೆ.ಜಿ. ಗಾಂಜಾ ಸಹಿತ ಆರೋಪಿ ಬಂಧನ
ಮಂಗಳೂರು, ಮಾ. 29: ನಗರದ ತಣ್ಣೀರುಬಾವಿ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹದಳ ಮತ್ತು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಅಝೀಝ್ (43) ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 25ಸಾವಿರ ರೂ. ವೌಲ್ಯದ 1.280 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಈತನ ಹಾಗೂ ಈತನ ಪತ್ನಿಯ ವಿರುದ್ಧ ಈಗಾಗಲೇ ಪಣಂಬೂರು ಮತ್ತು ಮಂಗಳೂರು ನಗರದ ಕರಾವಳಿ ಭದ್ರತಾ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಪಣಂಬೂರು ಸರಹದ್ದಿನ ತಣ್ಣೀರುಬಾವಿ ರ್ತಾರ್ ಆಯಿಲ್ ಶೇಖರಣಾ ಘಟಕದ ಬಳಿಯ ಪಾರ್ಕಿಂಗ್ ಜಾಗದಲ್ಲಿ ನಿಂತಿದ್ದ ಆಯಿಲ್ ಟ್ಯಾಂಕರ್ಗಳ ಮರೆಯಲ್ಲಿ ನಿಂತು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹದಳ ಮತ್ತು ಪಣಂಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್ ಮಾರ್ಗ ದರ್ಶನದಂತೆ ಮಂಗಳೂರು ನಗರ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಆರ್. ಗೌಡ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸತ್ಯನಾರಾಯಣ, ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಎಸ್ಐ ಶೀತಲ್ ಅಲಗೂರು, ರೌಡಿನಿಗ್ರ್ರಹ ದಳದ ಎಎಸ್ಐ ಮೊಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ. ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಇತರ ಪಣಂಬೂರು ಪೊಲೀಸರಿಂದ ನಡೆದಿರುತ್ತದೆ.