ನಾಳೆಯಿಂದಲೇ ಜೆಡಿಎಸ್-ಕಾಂಗ್ರೆಸ್ ಜಂಟಿ ಪ್ರಚಾರ: ಎಚ್.ವಿಶ್ವನಾಥ್
ಬೆಂಗಳೂರು, ಮಾ.30: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು.
ಚುನಾವಣಾ ಪ್ರಚಾರ ಹಾಗೂ ಮತ್ತಿತರ ವಿಚಾರ ಸಂಬಂಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.31(ನಾಳೆ)ರಂದು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಉಭಯ ಪಕ್ಷಗಳು ಮೈತ್ರಿ ಪರ್ವದ ಪರಿವರ್ತನಾ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
Next Story