ಮೀನುಗಾರರಿಗೆ ಇವಿಎಂ, ವಿವಿಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಉಡುಪಿ, ಮಾ. 30: ಉಪ್ಪುಂದ ಗ್ರಾಪಂ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸ್ವೀಪ್ ಕಾರ್ಯಕ್ರಮದಲ್ಲಿ ಉಡುಪಿಯ ಮೀನುಗಾರಿಕೆ ಉಪನಿರ್ದೇಶಕರು, ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಪ್ಪುಂದ ಗ್ರಾಪಂನ ಪಿಡಿಓ, ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಪಂನ ಇತರ ಸಿಬ್ಬಂದಿಗಳೊಡನೆ ಉಪ್ಪುಂದ ಗ್ರಾಪಂ ವ್ಯಾಪ್ತಿಯಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.
ಉಪ್ಪುಂದ ಗ್ರಾಮದ ಸುಮಾರು 80 ಮಂದಿ ಮೀನುಗಾರರು ಇವಿಎಂ ಮತ್ತು ವಿವಿಪ್ಯಾಟ್ ಕುರಿತ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮ ದಲ್ಲಿ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಮತದಾನದ ಮಹತ್ವ ಮತ್ತು ಕಡ್ಡಾಯ ಮತದಾನ ಮಾಡುವಂತೆ ತಿಳಿಸಲಾಯಿತು.
ಸಭೆಯಲ್ಲಿ ಮತದಾನ ಯಂತ್ರಗಳಾದ ಇವಿಎಂ ಹಾಗೂ ವಿವಿಪ್ಯಾಟ್ಗಳ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಲಾಯಿತು ಎಂದು ಉಡುಪಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story