ವಿಜಯ ಬ್ಯಾಂಕ್ ವಿಲೀನದ ವಿರುದ್ಧ ‘ಸಮಾನ ಮನಸ್ಕ’ರಿಂದ ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ
ಮಂಗಳೂರು, ಎ.1: ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಸಮಾನ ಮನಸ್ಕರು ನಗರದ ಅಂಬೇಡ್ಕರ್ ವೃತ್ತದ ಬಳಿಯಿರುವ ವಿಜಯ ಬ್ಯಾಂಕ್ನ ಪ್ರಧಾನ ಕಚೇರಿಯೆದುರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.
ಇಂದಿನಿಂದ ವಿಜಯ ಬ್ಯಾಂಕ್ ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಂಡ ಕಾರ್ಯಾಚರಿಸಲಿದೆ. ಕರಾವಳಿಯ ಜನರ ಆಗ್ರಹವನ್ನು ಕಡೆಗಣಿಸಿ, ವಿಲೀನ ಪ್ರಕ್ರಿಯೆ ನಡೆಸಿದ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಸಮಾನ ಮನಸ್ಕರು ಇಂದು ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಿಸಿದರು.
ಪ್ರತಿಭಟನೆಯಲ್ಲಿ ವಿಜಯಾ ಬ್ಯಾಂಕ್ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ದಿನೇಶ್ ಹೆಗ್ಡೆ ಉಳೆಪಾಡಿ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ಮೇಯರ್ ಕೆ.ಅಶ್ರಫ್, ಎಂ.ಜಿ.ಹೆಗ್ಡೆ, ಸುನೀಲ್ ಕುಮಾರ್ ಬಜಾಲ್, ಸಂತೋಷ್ಬಜಾಲ್, ದಯಾನಂದ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.