ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಉಡುಪಿ, ಎ.2: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಯೊಬ್ಬರು ಮೃತಪಟ್ಟ ಘಟನೆ ಎ.1ರಂದು ಸಂಜೆ ವೇಳೆ ಪುತ್ತೂರು ಗ್ರಾಮದ ಕೊಡಂಕೂರಿನ ಬಸ್ಸು ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಭಾಸ್ಕರ(65) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಬಸ್ಸು ನಿಲ್ದಾಣದ ಎದುರು ರಸ್ತೆ ವಿಭಾಜಕದ ಬಳಿ ನಿಂತಿದ್ದ ಭಾಸ್ಕರ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story