ಕಾರಿನಲ್ಲಿ ಅಕ್ರಮ ಮದ್ಯ ಮಾರಾಟ: ಓರ್ವ ಸೆರೆ
ಕುಂದಾಪುರ, ಎ.2: ಕಾರಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಕಾವ್ರಾಡಿ ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ಎ.1ರಂದು ಸಂಜೆ ವೇಳೆ ಬಂಧಿಸಿದ್ದಾರೆ.
ಯಡಮೊಗೆ ಗ್ರಾಮದ ಸುಧೀರ್ ಕುಮಾರ್ ಯಡಿಯಾಳ್ (37) ಬಂಧಿತ ಆರೋಪಿ.
ಈತ ಮಾರುತಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು 1114 ರೂ. ಮೌಲ್ಯದ ಒಟ್ಟು 2.430 ಲೀಟರ್ ಮದ್ಯ ಮತ್ತು 1880 ರೂ. ನಗದು ಹಾಗೂ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story