ಎ.5 ರಂದು ವಿಶ್ವ ಆರೋಗ್ಯ ದಿನಾಚರಣೆ
ಉಡುಪಿ, ಎ.4: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಮಣಿಪಾಲ ಕಾಲೇಜ್ ಆಪ್ ನರ್ಸಿಂಗ್ ಮಣಿಪಾಲ, ಎನ್ಸಿಡಿ ಘಟಕ ಜಿಲ್ಲಾಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯು ಎ.5 ರಂದು ಬೆಳಗ್ಗೆ 9:30ಕ್ಕೆ ಮಣಿಪಾಲದ ಮಣಿಪಾಲ ಕಾಲೇಜ್ ಆಪ್ ನರ್ಸಿಂಗ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story