ಎಸೆಸೆಲ್ಸಿ ಪರೀಕ್ಷೆ: 172 ಮಂದಿ ಗೈರು
ಉಡುಪಿ, ಎ. 4: ಗುರುವಾರ ನಡೆದ ಎಸೆಸೆಲ್ಸಿ ತೃತೀಯ ಭಾಷಾ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13,314 ಮಂದಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 13,486 ಮಂದಿ ಹೆಸರು ನೊಂದಾಯಿಸಿದ್ದು, ಇವರಲ್ಲಿ 172 ಮಂದಿ ಗೈರು ಹಾಜರಾಗಿದ್ದಾರೆ.
ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡ ರೆಗ್ಯುಲರ್ ಮತ್ತು ರೆಗ್ಯುಲರ್ ಪುನರಾವರ್ತಿತ 12,956 ಮಂದಿ ವಿದ್ಯಾರ್ಥಿಗಳಲ್ಲಿ 123 ಮಂದಿ ಗೈರು ಹಾಜರಾಗಿದ್ದು, 12833 ಮಂದಿ ಪರೀಕ್ಷೆ ಬರೆದಿದ್ದಾರೆ. ಖಾಸಗಿಯಾಗಿ ಪರೀಕ್ಷೆಗೆ ನೊಂದಾಯಿಸಿದ್ದ 423 ಅ್ಯರ್ಥಿಗಳಲ್ಲಿ 49 ಮಂದಿ ಗೈರು ಹಾಜರಾಗಿದ್ದು, 374 ಮಂದಿ ಪರೀಕ್ಷೆ ಬರೆದಿದ್ದಾರೆ. ಮಾಹಿತಿ ತಂತ್ರಜ್ಞಾನದಲ್ಲಿ ಒಟ್ಟು 61, ಆಟೋಮೊಬೈಲ್ನಲ್ಲಿ ಒಟ್ಟು 41 ಮಂದಿ, ಬ್ಯೂಟಿಷಿಯನ್ನಲ್ಲಿ ಒಟ್ಟು 5 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story