ಅಪೂರ್ಣ ಆಸ್ತಿ ವಿವರ: ಪ್ರಮೋದ್ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಒತ್ತಾಯ
ಉಡುಪಿ, ಎ.4: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಟಿಕೇಟ್ನಲ್ಲಿ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಅಪೂರ್ಣ ಆಸ್ತಿ ವಿವರಗಳನ್ನು ಸಲ್ಲಿಸಿರುವ ದೂರಿನ ಕುರಿತಂತೆ ಚುನಾವಣಾಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಪ್ರಮೋದ್ ಮಧ್ವರಾಜ್ ಪೂರ್ಣ ಆಸ್ತಿ ವಿವರ ಸಲ್ಲಿಸದಿರುವ ಕುರಿತು ಸತೀಶ್ ಎಂಬವರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತ್ರಿಯಿಸಿದ ಶೋಭಾ, ಚುನಾವಣಾಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನಿನ ವುೂಲಕ ಕ್ರಮ ಜರುಗಿಸಲಿ ಎಂದಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರ ನಾಮಪತ್ರವನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಕಾನೂನು ಎಲ್ಲರಿಗೂ ಒಂದೇ. ನಾಮಪತ್ರದ ಜೊತೆಗಿರುವ ಅಫಿದವತ್ನ ಲೋಪ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದವರು ಸುದ್ದಿಗಾರರಿಗೆ ತಿಳಿಸಿದರು.
Next Story